ಎಸ್ಸೆಸ್ಸೆಫ್ ಕೋಡಿ ದೋಟ ಹಾಗು ಕೋಟೆಪುರ ಶಾಖೆಯ ಜಂಟಿ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಕಾರ್ಯಕ್ರಮ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಕೋಡಿಯ ಶಾಖಾ ಕಛೇರಿಯಲ್ಲಿ ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ಅಜ್ಜಿನಡ್ಕ ಬ್ರಾಂಚ್ ಗೌರವಾಧ್ಯಕ್ಷರಾದ ಶರೀಫ್ ಸಅದಿ ಅನುಸ್ಮರಣಾ ಪ್ರಭಾಷಣ ಮಾಡಿದರು. ಮುಡಿಪು ಸೆಕ್ಟರ್ ಉಪಾಧ್ಯಕ್ಷರಾದ ಅಶ್ರಫ್ ಸಖಾಫಿ ಕುರ್ನಾಡು ಹಾಗು ಸಯ್ಯಿದ್ ಖುಬೈಬ್ ತಂಗಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಎಸ್ಸೆಸ್ಸೆಫ್ ಕೋಡಿ ದೋಟ ಶಾಖಾಧ್ಯಕ್ಷ ಹಾಶಿರ್ ಕೋಡಿ, ಎಸ್ಸೆಸ್ಸೆಫ್ ಕೋಟೆಪುರ ಶಾಖಾ ಕೋಶಾಧಿಕಾರಿ ಯಾಸಿರ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್, ಅಬ್ದುಲ್ಲಾಹ್ ಕೋಟೆಪುರ, ಇರ್ಫಾನ್ ಕೋಟೆಪುರ, ಅಬ್ದುಲ್ ಖಾದರ್ ಕೋಡಿ, ಅಬ್ದುಲ್ ಅಝೀಝ್ ಸಿ ರೋಡ್ ಕೋಡಿ, ಇಮ್ರಾನ್ ಹಾಗು ಎಸ್ಸೆಸ್ಸೆಫ್ ಕಾರ್ಯಕರ್ತರು ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ಕೋಡಿ ದೋಟ ಶಾಖಾ ಪ್ರಧಾನ ಕಾರ್ಯದರ್ಶಿ ಹಫೀಝ್ ಕೋಡಿ ಸ್ವಾಗತಿಸಿ ಎಸ್ಸೆಸ್ಸೆಫ್ ಕೋಟೆಪುರ ಶಾಖಾ ಪ್ರಧಾನ ಕಾರ್ಯದರ್ಶಿ ನೌಫಲ್ ಕೋಟೆಪುರ ಧನ್ಯವಾದಗೈದರು. ಎಸ್ಸೆಸ್ಸೆಫ್ ಕೋಡಿ ದೋಟ ಶಾಖಾ ಕೋಶಾಧಿಕಾರಿ ಅತೀಖ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.
Friday, 24 February 2017
ಎಸ್ಸೆಸ್ಸೆಫ್ ಕೋಡಿ ದೋಟ ಹಾಗು ಕೋಟೆಪುರ ಶಾಖೆಯ ಜಂಟಿ ಆಶ್ರಯದಲ್ಲಿ ರಿಫಾಯೀ ಶೈಖ್ ಅನುಸ್ಮರಣಾ ಕಾರ್ಯಕ್ರಮ
Subscribe to:
Post Comments (Atom)
No comments:
Post a Comment