ಎಸ್ ವೈ ಎಸ್ ಉಳ್ಳಾಲ ಸೆಂಟರ್ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜಂಟಿ ಆಶ್ರಯದಲ್ಲಿ ಮೌಲಿದು ಮಿಹ್ರಾಜಿನ್ನಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ ಸಮ್ಮಿಲನ ಹಾಗು ತಹ್ಲೀಲ್ ಸಂಗಮ ಕೈಕೋವಿನ ಇಲ್ಯಾಸ್ ಪ್ಯಾಲೇಸ್ ನಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ದುವಾ ನೆರವೇರಿಸಿದರು. ಮಿಹ್ರಾಜ್ ಮೌಲಿದಿನ ನೇತ್ರತ್ವವನ್ನು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ ವಹಿಸಿದರು. ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷರಾದ ಜಮಾಲ್ ಉಸ್ತಾದ್ ಮಿಹ್ರಾಜ್ ದಿನದ ಶ್ರೇಷ್ಟತೆಯನ್ನು ವಿವರಿಸಿದರು. ಬಳಿಕ ನಿನ್ನೆ ( 23-04-2017 ) ಸಮುದ್ರದ ಅಲೆಗೆ ಸಿಲುಕಿ ಆಕಸ್ಮಿಕವಾಗಿ ಮರಣ ಹೊಂದಿದ ಉಳ್ಳಾಲ ಮಾಸ್ತಿಕಟ್ಟೆಯ ಹನೀಫ್ ಮತ್ತು ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕರೋಪಾಡಿ ಹಾಗು ರಿಯಾಝ್ ಉಸ್ತಾದ್ ಕೊಟ್ಟಮುಡಿ ಮತ್ತು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯದರ್ಶಿ ಇಲ್ಯಾಸ್ ಕೈಕೊ ಇವರ ತಂದೆಯ ಮೇಲೆ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಎಸ್ಸೆಸ್ಸೆಫ್ ಕೋಟೆಪುರ ಶಾಖಾಧ್ಯಕ್ಷ ಮುಝಮ್ಮಿಲ್ ಉಸ್ತಾದ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಸೆಕ್ಟರ್ ಜೊತೆ ಕಾರ್ಯದರ್ಶಿಗಳಾದ ಹಫೀಝ್ ಬೊಟ್ಟು ಹಾಗು ಇಕ್ಬಾಲ್ ಒಂಭತ್ತುಕೆರೆ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್, ಎಸ್ಸೆಸ್ಸೆಫ್ ಒಂಭತ್ತುಕೆರೆ ಶಾಖಾ ಪ್ರಧಾನ ಕಾರ್ಯದರ್ಶಿ ನಿಝಾಂ ಒಂಭತ್ತುಕೆರೆ, ರಾಝಿಖ್ ಒಂಭತ್ತುಕೆರೆ ಹಾಗು ಅನಸ್ ಮೇಲಂಗಡಿ ಉಪಸ್ಥಿತರಿದ್ದರು.
No comments:
Post a Comment