Share To

Saturday, 30 September 2017

ಸ್ನೇಹ ಸಭೆ ಹಾಗು ಸನ್ಮಾನ ಸಮಾರಂಭ ಕಾರ್ಯಕ್ರಮ

SSF ಉಳ್ಳಾಲ ಸೆಕ್ಟರ್ ಆಶ್ರಯದಲ್ಲಿ ಸ್ನೇಹ ಸಭೆ ಹಾಗು ಸನ್ಮಾನ ಸಮಾರಂಭ ಕಾರ್ಯಕ್ರಮ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ ನಡೆಯಿತು.
ಮಲ್ಜಹ್ ಕ್ಯಾಂಪಸ್ಸಿನಲ್ಲಿ ನಡೆಯಲಿರುವ 4g ಕ್ಯಾಂಪಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಈ ಸಂದರ್ಭದಲ್ಲಿ ನಡೆಯಿತು.
SSF ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ದ.ಕ ಜಿಲ್ಲಾ ಎಸ್ಸೆಸ್ಸೆಫ್ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಹಾಗು ಕೆಲಸ ನಿಮಿತ್ತ ಪ್ರಯಾಣ ಬೆಳೆಸಲಿರುವ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಶರೀಫ್ ಸಅದಿ ಸುಂದರಭಾಗ್ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಮಾತನಾಡಿದರು.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಹಾಗು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಬಸ್ತಿಪಡ್ಪು ಉಪಸ್ಥಿತರಿದ್ದರು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹಫೀಜ್ ಬೊಟ್ಟು ಧನ್ಯವಾದಗೈದರು

No comments:

Post a Comment